Latest

ಖ್ಯಾತ ಟಿವಿ ನಟಿಗೆ ಕಿಡ್ನಿ ವೈಫಲ್ಯ: ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿ ವಾಹಿನಿ ಸುದ್ದಿ; ಮುಂಬೈ: ಖ್ಯಾತ ಟಿವಿ ನಟಿ ಅನಯಾ ಸೋನಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೈಂ ಪ್ಯಾಟ್ರೋಲ್ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ನಟಿಸಿರುವ ಅನಯಾ ಸೋನಿ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿವೆ. ತನ್ನ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕುರಿತು ನಟಿ ಸ್ವತಃ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.

ನನ್ನ ದೇಹದ ಕ್ರೆಟಿನೈನ್ ಮಟ್ಟ 15.76 ಗೆ ತಲುಪಿದ್ದು ಹಿಮೋಗ್ಲೋಬಿನ್ ಮಟ್ಟ ‌6.7 ಗೆ ಇಳಿದಿದೆ. ಗಂಭೀರ ಆರೋಗ್ಯದ ಸ್ಥಿತಿಯನ್ನು ಎದುರಿಸುತ್ತಿದ್ದೇನೆ. ಆದಷ್ಟು ಶೀಘ್ರದಲ್ಲಿ ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ

Home add -Advt

https://pragati.taskdun.com/politics/kitturu-channammaji-vijaya-jyoti-yatrecm-bsavaraj-bommaibangalore/

Related Articles

Back to top button