Latest

ಟ್ವಿಟರ್ ನಲ್ಲಿ ಕಾವೇರಿದ ‘ನೀಟ್ ರದ್ದು’ ಅಭಿಯಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ರಾಜ್ಯದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದು, ರಾಷ್ಟ್ರೀಯ ಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಬ್ಯಾನ್ ಮಾಡದಿರುವುದೇ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುದ್ಧ ಪೀಡಿತ ಉಕ್ರೇನ್ ನಲ್ಲಿ ರಾಜ್ಯದ ಮೆಡಿಕಲ್ ವಿದ್ಯಾರ್ಥಿಗಳು ಸಿಲುಕಿರುವ ಮಧ್ಯೆಯೇ ನೀಟ್ ಪರೀಕ್ಷೆ ನಿಷೇಧಿಸುವಂತೆ ಒತ್ತಾಯಗಳು ತೀವ್ರಗೊಂಡಿವೆ.

ನೀಟ್‌ ರದ್ದು ಪಡಿಸಬೇಕು’ ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ ಬೃಹತ್ ಅಭಿಯಾನ ಪ್ರಾರಂಭವಾಗಿದೆ.‌ ಕರ್ನಾಟಕ ರಕ್ಷಣಾ ವೇದಿಕೆ ಈ ಅಭಿಯಾನವನ್ನು ಪ್ರಾರಂಭಿಸಿದೆ.

ಕನ್ನಡದ ಮಕ್ಕಳಿಗೇ ವೈದ್ಯಕೀಯ ಸೀಟು ಇಲ್ಲ. ನೀಟ್ ಹೆಸರಲ್ಲಿ ನಮ್ಮ ಹಕ್ಕುಗಳನ್ನು ಕಿತ್ತು ಕೊಳ್ಳಲಾಗಿದೆ. ಕರ್ನಾಟಕದ ಕಾಲೇಜು ಗಳಲ್ಲಿ ಉತ್ತರ ಭಾರತೀಯರನ್ನು ತುಂಬುವ ಯೋಜನೆಯೇ ನೀಟ್. ಒಂದೆಡೆ ವೈದ್ಯಕೀಯ ಸೀಟಿಗೆ ಕೋಟ್ಯಂತರ ರೂಪಾಯಿ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯನ್ನು ಮೊದಲು ರದ್ದುಮಾಡಿ. ಸಿಇಟಿ ಮರುಸ್ಥಾಪಿಸಿ ಎಂಬ ಟ್ವೀಟ್ ಅಭಿಯಾನ ಪ್ರಾರಂಭವಾಗಿದೆ. ಇದಕ್ಕೆ ವಿಧ್ಯಾರ್ಥಿಗಳು ಧ್ವನಿ ಕೂಡಿಸಿದ್ದಾರೆ.  ಖಾಸಗಿ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರ ಉನ್ನತ ಹಂತದ ಶಿಕ್ಷಣಕ್ಕೆ ಕಡಿಮೆ ಶುಲ್ಕ ನಿಗದಿಪಡಿಸಬೇಕು’ ಎಂದು ಹಲವು ಗಣ್ಯರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ವಿದ್ಯಾರ್ಥಿ ಸಾವಿನ ಬೆನ್ನಲ್ಲೇ ನೀಟ್ ವಿರುದ್ಧ ಭುಗಿಲೆದ್ದ ಆಕ್ರೋಶ; NEET ಬ್ಯಾನ್ ಗೆ ಕುಮಾರಸ್ವಾಮಿ ಆಗ್ರಹ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button