Belagavi NewsBelgaum NewsKannada NewsKarnataka News

*ಸರಗಳ್ಳತನ ಮಾಡಿದ ಇಬ್ಬರು ಆರೋಪಿಗ ಬಂಧನ*

ಪ್ರಗತಿವಾಹಿನಿ ಸುದ್ದಿ: ಸರಗಳ್ಳತನ ಮಾಡಿದ ಇಬ್ಬರು ಆರೋಪಿಗಳ‌ನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಬಂಧಿಸಿ, ₹2.25 ಲಕ್ಷ ಮೌಲ್ಯದ 3.75 ಗ್ರಾಂ ತೂಕದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Home add -Advt

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಭೀಮ ನಗರ ನಿವಾಸಿಗಳಾದ ಸದ್ದಾಂ ಮೆಹಬೂಬ್ ಅವಟಿ (24), ಮಹಮ್ಮದ್‌ ಅಲಿ ಸಿರಾಜ ಡಾಂಗೆ (24) ಬಂಧಿತರು. ಮೇ28ರಂದು ಚಿಂಚಲಿ ರಸ್ತೆಯ ನಿವಾಸಿ ಸುನೀತಾ ಅಪ್ಪಾಸಾಬ ಪೂಜೇರಿ ಅವರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ರಾಯಬಾಗ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್.ಪಿ.ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ಶ್ರುತಿ ಎನ್. ಅವರ ಮಾರ್ಗದರ್ಶನದಲ್ಲಿ ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ಲೆ, ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ನೇತೃತ್ವದಲ್ಲಿ ರಾಯಬಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Related Articles

Back to top button