
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಲುರು ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ್ (45) ಮೃತ ಹೆಡ್ ಕಾನ್ಸ್ ಟೇಬಲ್. ಬೆಂಗಳೂರಿನ ಉಪ್ಪಾರಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಲೂರು ಮೂಲದವರಾಗಿದ್ದರು.
ಡ್ಯೂಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಹೆಡ್ ಕಾನ್ಸ್ ಟೇಬಲ್ ಮೃತಪಟ್ಟಿದ್ದಾರೆ. ಇನ್ನೋರ್ವ ಬೈಕ್ ಸವಾರನಿಗೆ ಗಾಯಗಳಾಗಿವೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ