Belagavi NewsBelgaum News

*ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ; ಓರ್ವ ಸವಾರ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಹಳ್ಳಿ ಗ್ರಾಮದ ನಿವಾಸಿ ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತ ದುರ್ದೈವಿ. ಎರಡು ಬೈಕ್ ಗಳ ನಡುವೆ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಇನ್ನೋರ್ವ ಬೈಕ್ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಐಗಳಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button