Kannada NewsKarnataka NewsNational
*ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು*

ಪ್ರಗತಿವಾಹಿನಿ ಸುದ್ದಿ: ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರನ್ನು ಶಂಕರಪುರದ ಸೋಮು (14) ಹಾಗೂ ಮುತ್ತುರಾಜು (17) ಗುರುತಿಸಲಾಗಿದೆ. ಕೆರೆಯಲ್ಲಿ ಈಜು ಹೊಡೆಯಲೆಂದು ಸೋಮು, ಮುತ್ತುರಾಜು ಸೇರಿ ಐವರು ಸ್ನೇಹಿತರು ಕೆರೆಗೆ ತೆರಳಿದ್ದರು. ಈ ವೇಳೆ ಈಜು ಬಾರದೇ ಸೋಮು ಹಾಗೂ ಮುತ್ತುರಾಜು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೆರೆಯಲ್ಲಿ ಮುಳುಗಿದವರಲ್ಲಿ ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಘಟನೆಗೆ ಸಂಬಂಧಿಸಿ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




