Belagavi NewsBelgaum NewsCrimeKannada NewsKarnataka News

*ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಬಾಲಕರನ್ನು ಶಿವಾಜಿ ನಗರದ ನಿವಾಸಿ ಶಿವಂ ಪರಶುರಾಮ ಸುಂಡೀಕರ್ (7) ಮತ್ತು ಶಾಹಾಪುರದ ಜೇಡಗಲ್ಲಿ ನಿವಾಸಿ ಪರಶುರಾಮ ರಾಜು ನೀಲಜಕರ್ (11) ಎಂದು ಗುರುತಿಸಲಾಗಿದೆ. 

Home add -Advt

ಬಾಲಕರು ನೀರಿನಲ್ಲಿ ಮುಳುಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ, ಬಾಲಕರ ಮೃತದೇಹಗಳನ್ನು ಹೊಂಡದಿಂದ ಹೊರತೆಗೆದಿದೆ.

ಮೃತದೇಹಗಳನ್ನು ಹೊರಕ್ಕೆ ತರುತ್ತಿದ್ದಂತೆಯೇ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಖಡೇಬಜಾ‌ರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. 

Related Articles

Back to top button