Latest

PSI ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಿಗೆ ED ಬಿಗ್ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರೋಪಿ ಎಡಿಜಿಪಿ ಅಮೃತ್ ಪೌಲ್, ಶಾಂತಕುಮಾರ್ ಮನೆ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಸಹಕಾರ ನಗರದಲ್ಲಿರುವ ಅಮೃತ್ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಒಟ್ಟು 11 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪಿ ಎಸ್ ಐ ಹುದ್ದೆ ನೇಮಕಾತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲಿಸಿಕೊಂಡಿರುವ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ

https://pragati.taskdun.com/latest/state-govt-employees7th-pay-commissioncm-basavaraj-bommai/

Related Articles

Back to top button