Belagavi NewsBelgaum News

*ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಬಳಿ ಈ ಅಪಘಾತ ಸಂಭವಿಸಿದ್ದು, ಒಂದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಗಗಂಡ, ಹೆಂಡತಿ ಮತ್ತು ಮಗು ಮೃತಪಟ್ಟಿದ್ದಾರೆ.

ಮಾಜಿ ಶಾಸಕ ಆರ್.ವಿ.ಪಾಟೀಲ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿನಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button