ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದಿದೆ.
ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ XUV 700 ಕಾರು, ಕಿಯಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸೂರು ಕಡೆ ತೆರಳುತ್ತಿದ್ದ XUV 700 ಕಾರು ಮೈಸೂರು ರಸ್ತೆಯತ್ತ ತೆರಳುತ್ತಿದ್ದ ಕಿಯಾ ಕಾರಿಗೆ ಡಿಕ್ಕಿಯಾಗಿದ್ದು, ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಗುದ್ದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ