ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕರೆಗಳಪಾಳ್ಯ ಗ್ರಾಮದಲ್ಲಿ ನಡೆದಿದೆ.
ಗೌರಿ ಗಣೇಶ ಹಬ್ಬ ಮುಗಿಸಿ ಊರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ