
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಹಲವಾರು ರಸ್ತೆಗಳು ಕರೆ ಸ್ವರೂಪ ಪಡೆದುಕೊಂಡಿದೆ. ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಎರಡು ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ ಭಾಗದಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದು, ಆಸ್ಪತ್ರೆಗೆಂದು ಹೋಗುತ್ತಿದ್ದ ಕಾರೊಂದು ಮಳೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ನಾಗಾರ್ಜುನ ಕಾಲೇಜು ಬಳಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ಜನ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ