National

*ರಾಹುಲ್ ಗಾಂಧಿ ವಿರುದ್ಧ ಎರಡು ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಆದರೆ ಹೀಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ  ರಾಹುಲ್ ಗಾಂಧಿ ವಿರುದ್ಧ ಎರಡು ಪ್ರಕರಣಗಳು ದಾಖಲಿಸಲಾಗಿದೆ.

ನಿಷೇಧಾಜ್ಞೆ ಹೊರತಾಗಿಯೂ ಮೇ 15 ರಂದು ಬಿಹಾರದ ದರ್ಭಾಂಗ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಕಾಂಗ್ರೆಸ್ ನ ರಾಜ್ಯವ್ಯಾಪಿ ಸಾರ್ವಜನಿಕ ಪಾಲ್ಗೊಳ್ಳುವಿಕೆ ಅಭಿಯಾನದ ಭಾಗವಾಗಿ ಶಿಕ್ಷಾ, ನ್ಯಾಯ್ ಸಂವಾದ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಹಾಸ್ಟೆಲ್ ಅಲ್ಲಿ ಅನುಮತಿ ಪಡೆಯದೆ ಕಾರ್ಯಕ್ರಮವನ್ನು ಆಯೋಜಿಸಿದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣಗಳು ದಾಖಲಾಗಿವೆ.  

ಇದಕ್ಕೂ ಮುಂಚೆ ನಿಷೇಧಾಜ್ಞೆಯ ಹಿನ್ನಲೆ ಜಿಲ್ಲಾಡಳಿತ ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿತ್ತು ಜೊತೆಗೆ ಬೇರೆ ಸ್ಥಳವನ್ನು ಸೂಚಿಸಿತ್ತು. ಆದರೆ ಕಾಂಗ್ರೆಸ್ ಈ ಸಲಹೆಯನ್ನು ತಿರಸ್ಕರಿಸಿತು, ಇದನ್ನು ಮೀರಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮ ಆಯೋಜಿಸಿದ್ದರು.

ಅಷ್ಟೇ ಅಲ್ಲದೆ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿಯ ಆಕ್ಷೇಪಿಸಿದರೂ ಕೂಡ ಬೇರೆ ಮಾರ್ಗದಿಂದ ಹಾಸ್ಟೆಲ್ ಗೆ ಪ್ರವೇಶಿಸಿ ಕಾರ್ಯಕ್ರಮ ನಡೆಸಿದ್ದರು. ಇದೀಗ ಈ ಬಗ್ಗೆ ಜಿಲ್ಲಾ ಕಲ್ಯಾಣ ಅಧಿಕಾರಿಯು ಲಾಹೆರಿಯಾಸರಾಯ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಈ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

ಜೊತೆಗೆ ನಿಷೇಧಾಜ್ಞೆಯ ಹಿನ್ನಲೆ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ವ. ಆದರೂ ಕೂಡ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿದ್ದಕ್ಕೆ ನಾಯಕ ರಾಹುಲ್ ಗಾಂಧಿ ಹಾಗೂ ನೂರಕ್ಕೂ ಅಧಿಕ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button