Latest

*ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಪತ್ತೆಯಾಗಿದ್ದ ಮಕ್ಕಳಿಬ್ಬರೂ ಮನೆಯ ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದೆಹಲಿಯ ಜಾಮಿಯಾ ನಗರ ಪ್ರದೇಶದಲ್ಲಿ ನಡೆದಿದೆ.

ಮನೆಯಲ್ಲಿ ಆಟವಾಡುತ್ತಿದ್ದ ಅಣ್ಣ-ತಂಗಿ ಇಬ್ಬರೂ ಇದ್ದಕ್ಕಿದ್ದಂತೆ ನಿನ್ನೆ ನಾಪತ್ತೆಯಾಗಿದ್ದರು. ಈಗ ಮನೆಯ ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 8 ವರ್ಷದ ನೀರಜ್ ಹಾಗೂ 6 ವರ್ಷದ ಆರತಿ ಮೃತ ಮಕ್ಕಳು.

Home add -Advt

ತಂದೆ ಬಲ್ಬೀರ್ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮನೆಯಲಿಯೇ ಆಟವಾಡುತ್ತಿದ್ದ ಮಕ್ಕಳು ನಿನ್ನೆ ಮಧ್ಯಾಹ್ನ ಊಟದ ಬಳಿಕ ಕಾಣೆಯಾಗಿದ್ದರು. ಆಟವಾದುತ್ತಾ ಮರದ ಪೆಟ್ಟಿಗೆಯೊಳಗೆ ಹೋಗಿದ್ದಾರೆ. ಹೊರಬರಲು ಸಾಧ್ಯವಾಗದೇ ಉಸಿರುಗಟ್ಟಿ ಮಕ್ಕಳಿಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳ ಮೈಮೇಲೆ ಯಾವುದೇ ಗಾಯದ ಗುರುತು ಕೂಡ ಪತ್ತೆಯಾಗಿಲ್ಲ. ಹಾಗಾಗಿ ಉಸಿರುಗಟ್ಟಿ ಮೃತಪಟ್ಟಿರಬಹುದು ಎನ್ನಲಾಗಿದೆ.

ಜಾಮಿಯಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/cyclonealertkarnatakamonsoon-delayed/

Related Articles

Back to top button