
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ ಕರಿಹೊಳ(30) ಎಂಬ ಮಹಿಳೆ ಮಕ್ಕಳಾದ ಸ್ವಾತ್ವಿಕ್ (5) ಮುತ್ತಪ್ಪ (1) ಜೊತೆ ಬಾವಿಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಬೆಳಿಗ್ಗೆ ಯಲ್ಲವ್ವ ಹಾಗೂ ಪತಿ ನಡುವೆ ಜಗಳವಾಗಿತ್ತು. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳ ಜೊತೆ ಬಾವಿಗೆ ಹಾರಿ ಮಹಿಳೆ ಸಾವಿಗೆ ಶರಣಾಗಿದ್ದಾರೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ