Kannada NewsKarnataka NewsLatest

*ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಛತ್ರಕೋಡಿಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಗ್ಲಿಬೆಣಜೇನಹಳ್ಳಿಯ ಪ್ರಮೀಳಾ ಹಾಗೂ ಮಗಳು ಸ್ವಪ್ನಾ, ಮಗ ಚರಣ್ ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button