Kannada NewsKarnataka NewsLatest
*ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಕೊಲೆಗೈದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ವಿಜಯ್ ಕುಮಾರ್ (31) ಹಾಗು ಹೇಮಾವತಿ (29) ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆಂಧ್ರಪ್ರದೇಶ ಮೂಲದ ದಂಪತಿ ಮಕ್ಕಳೊಂದಿಗೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಇದೀಗ ಏಕಾಏಕಿ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.




