Kannada NewsKarnataka NewsLatest

*ಕರ್ನಾಟಕದಲ್ಲಿ ಎರಡು ದಿನ ಮಳೆ ಮುನ್ಸೂಚನೆ*: *ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್ 3ರಂದು ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ. ಮಂಡ್ಯ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು.

ಇನ್ನು ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 3ರಂದು ಮುಖ್ಯವಾಗಿ ಒಣಹವೆ ಇರಲಿದೆ.

ಅಕ್ಟೋಬರ್ 4ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ರಾಜ್ಯದಲ್ಲಿ ಶುಕ್ರವಾರ ಸಂಜೆಗೆ ಕೊನೆಗೊಂಡಂತೆ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಈ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂ.ಮೀ., ಭಾಗಮಂಡಲದಲ್ಲಿ 3 ಸೆಂ.ಮೀ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button