Kannada NewsKarnataka News

*ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಗದಗ ಜಿಲ್ಲೆಯ ರೋಣದಲ್ಲಿ ಪಟ್ಟಣದಲ್ಲಿ ನಡೆದ ಶ್ರೀ ವೀರಭದ್ರೇಶ್ವರ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ದಾರುಣವಾಗಿ ಸಾವನ್ನಪ್ಪಿರುವ ದುರಂತ ಸಂಭವಿಸಿದೆ. 

ಜಾತ್ರಾ ಮಹೋತ್ಸವದ ಅಂಗವಾಗಿ ರೋಣ ಪಟ್ಟಣದ ರಾಜ ಬೀದಿಯಲ್ಲಿ ತೇರು ಸಾಗುತ್ತಿದ್ದಾಗ, ಭಕ್ತರಿಂದ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ರಥದ ಚಕ್ರದಡಿ ಇಬ್ಬರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. 

ಮೃತರನ್ನು ರೋಣದ ಕೆವಿಜಿ ಬ್ಯಾಂಕ್‌ನ ಪಿಗ್ಮಿ ಕಲೆಕ್ಟ‌ರ್ ಆಗಿದ್ದ ಮಲ್ಲನಗೌಡ ಲಿಂಗನಗೌಡರ (52) ಹಾಗೂ ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ಮತ್ತೊಬ್ಬ ಮೃತನ ಹೆಸರು ಹಾಗೂ ವಿಳಾಸವನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ರೋಣ ಪೊಲೀಸ್ ಠಾಣೆಯೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.‌

Home add -Advt

Related Articles

Back to top button