Belagavi NewsBelgaum NewsKannada NewsKarnataka News

*ಚಿಕ್ಕೋಡಿ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ಇಬ್ಬರು ರೈತರ ಸಾವು*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಸುರಿದ ಮಳೆ ಅನೇಕ ಹಾನಿ ಉಂಟು ಮಾಡಿದೆ.‌ ಸಿಡಿಲು ಹೊಡೆದು ಇಬ್ಬರು ರೈತರು ಹಾಗೂ 12 ಕುರಿಗಳು ಸಾವನ್ನಪ್ಪಿದರೆ, ಹಲವರಿಗೆ ಗಾಯವಾಗಿದೆ.‌

Home add -Advt

ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಹೊಡೆದು ಗುರು ಪುಂಡಲಿಕ (35) ಎಂಬ ರೈತ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಹೊಡೆದು 12 ಕುರಿಗಳು ಸಾವು ಸಂಭವಿಸಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೋಂದು ಕಡೆ ರಾಯಭಾಗ ಪಟ್ಟಣದ ಹೊರವಲಯದ ಶೋಭಾ ಕೃಷ್ಣ ಕುಲಗೋಡೆ (45) ರೈತ ಮಹಿಳೆ ಮೃತ ಪಟ್ಟಿದ್ದಾರೆ. ಮಲ್ಲಪ್ಪ ಶಂಕರ್ ಮೇತ್ರಿ ಹಾಗೂ ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ರಾಯಭಾಗ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಯಭಾಗ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button