
ಪ್ರಗತಿವಾಹಿನಿ ಸುದ್ದಿ: ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆಯ ವೈಫಲ್ಯ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲೇ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತ್ ಚಂದ್ರ ಅವರನ್ನು ಟ್ರಾಫಿಕ್, ರಸ್ತೆ ಸುರಕ್ಷತಾ ಎಡಿಜಿಪಿಯನ್ನಾಗಿ ಹಾಗೂ ಪೊಲೀಸ್ ಇಲಾಖೆ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿದೆ.
ಇದೇ ವೇಳೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಹೇಮಂತ್ ನಿಂಬಾಳ್ಕರ್ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತರಾಗಿಯೂ ಮುಂದುವರೆಯಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ