ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಶ್ರೀಗಂಧದ ಮರ ಕಡಿದು ತುಂಡುಗಳನ್ನು ಸಾಗಿಸುತ್ತಿದ್ದ ಎರಡು ಬೇರೆ ಬೇರೆ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಹಾಗೂ ಜ್ಞಾನಭಾರತಿ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಈ ಬಗ್ಗೆ ನಿಖರ ಮಾಹಿತಿ ಆಧರಿಸಿ ಜ್ಞಾನಭಾರತಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ರಾಮನಗರದ ಇರುಳಿಗರ ದೊಡ್ಡಿ ಗ್ರಾಮದ ಸಾಕಯ್ಯ ಅಲಿಯಾಸ್ ‘ಸಾಕ’ ಎಂಬಾತನನ್ನು ಬಂಧಿಸಿದ್ದಾರೆ.ಇನ್ನು ಇಬ್ಬರು ತಲೆಮರೆಸಿಕೊಂಡಿದ್ದು ಅವರಿಗೆ ಶೋಧ ನಡೆಸಲಾಗುತ್ತಿದೆ
ಈ ಬಂಧಿತನಿಂದ ಸದ್ಯ ₹5 ಲಕ್ಷ ಮೌಲ್ಯದ 115 ಕೆ.ಜಿ ಶ್ರೀಗಂಧದ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ತಿಂಗಳು ನವೆಂಬರ್ 13ರಂದು ರಾತ್ರಿ ಜ್ಞಾನಭಾರತಿ ಆವರಣದಲ್ಲಿ ನಾಲ್ವರು ಆರೋಪಿಗಳು ಶ್ರೀಗಂಧದ ಮರವನ್ನು ಕಡಿಯುತ್ತಿದ್ದ ವೇಳೆ ಶಬ್ದ ಕೇಳಿಬಂದ ನಂತರ ಕಾವಲುಗಾರ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.
ಇದ್ರಿಂದ ತಕ್ಷಣವೇ ಕಳ್ಳರು ಮರ ಕಡಿಯುವ ಎಲ್ಲಾ ಸಾಮಗ್ರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿ ಆಗಿದ್ದರು ಆರೋಪಿಯಿಂದ ₹14.60 ಲಕ್ಷ ಮೌಲ್ಯದ 146 ಕೆ.ಜಿ ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ