Film & EntertainmentKannada NewsKarnataka NewsNationalPolitics

*ಪುಷ್ಪ 2 ವೀಕ್ಷಣೆ ವೇಳೆ ಕಾಲ್ತುಳಿತ: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಬಹು ನಿರೀಕ್ಷಿತ ಪುಷ್ಪ 2  ದಿ ರೂಲ್ ಚಿತ್ರ ಬಿಡುಗಡೆಯಾಗಿದ್ದು, ಆಂಧ್ರ ಪ್ರದೇಶದ ಆರ್ ಟಿಸಿ ಕ್ರಾಸ್ ರೋಡ್ ನ ಸಂಧ್ಯಾ ಥಿಯೇಟರ್‌ನಲ್ಲಿ ಬಾರೀ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಪುಷ್ಪ 2 ಸಿನೆಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹಾಗೂ ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಲಾಗಿದೆ. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಓರ್ವ ಮಹಿಳೆ ಹಾಗೂ ಓರ್ವ ಬಾಲಕ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ದಿಲ್ ಸುಖ್ ನಗರದ ರೇವತಿ (39) ಎಂದು ಗುರುತಿಸಲಾಗಿದೆ. ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ.

ಇನ್ನು ಘಟನೆಯಲ್ಲಿ ಚಿಕ್ಕ ಬಾಲಕನೋರ್ವ ಅಸ್ವಸ್ಥನಾಗಿದ್ದು, ಕೂಡಲೇ ಪೊಲೀಸರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button