
ಪ್ರಗತಿವಾಹಿನಿ ಸುದ್ದಿ : ಹಿಟ್ & ರನ್ ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ
ಚಿತ್ರದುರ್ಗದ ಪಟ್ಟರೆಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ರಿಪೇರಿ ಆಗಿದ್ದರಿಂದ ರಸ್ತೆ ಬದಿ ನಾಲ್ವರು ರಿಪೇರಿಗಾಗಿ ನಿಂತಿದ್ದರು. ಈ ವೇಳೆ ಅಪಚಿತವಾ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದರೆ, ಇಬ್ಬರಿಗೆ ಗಾಯಗಳಾಗಿವೆ.
ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹಗಳನ್ನು ಶವಪರೀಕ್ಷೆಗೆ ರವಾನೆ ಮಾಡಲಾಗಿದೆ. ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



