
ಪ್ರಗತಿವಾಹಿನಿ ಸುದ್ದಿ: ಪತಿಯ ಅಕ್ರಮ ಸಂಬಂಧದ ಪರಿಣಾಮ ಎರಡು ಅಮಾಯಕ ಜೀವಗಳು ಬಲಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಲ್ಲಿ ನಡೆದಿದೆ. ತನ್ನ ಪತಿಯ ಅಕ್ರಮ ಸಂಬಂಧದಿಂದ ನೊಂದ ಪತ್ನಿ ತನ್ನ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ಶೃತಿ (33) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಶೃತಿ ಅವರು ಮೊದಲು ತಮ್ಮ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿದ್ದಾರೆ. ಆ ನಂತರ ಅದೇ ಫ್ಯಾನಿಗೆ ಅವರು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಶ್ರುತಿಯವರ ಗಂಡ ಗೋಪಾಲಕೃಷ್ಣ ಎಂಬಾತನ ಅಕ್ರಮ ಸಂಬಂಧಕ್ಕೆ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ತಮ್ಮ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ