LatestNational

*ಮತ್ತೊಂದು ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದು, 30 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೊಗಿಲಿಘಾಟ್ ಬಳಿ ನಡೆದಿದೆ.

ಎರಡು ಲಾರಿಗಳು ಡಿಕ್ಕಿಯಾಗಿ ಒಂದು ಲಾರಿ ಡಿವೈಡರ್ ಗೆ ಗುದ್ದಿ ಬಳಿಕ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದಾರೆ. 30 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚಾರಣೆ ನಡೆಸಿದ್ದಾರೆ.


Related Articles

Back to top button