*ಬೆಳಗಾವಿಯಲ್ಲಿ ಇಬ್ಬರು ಎಂಇಎಸ್ ಮುಖಂಡರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಸೆಳಕೆ ಹಾಗೂ ಮನೋಹರ್ ಹುಂದ್ರಿ ಅವರನ್ನು ಖಡೇಬಜಾರ್ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಇಬ್ಬರಿಗೂ ನವೆಂಬರ್ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧನದ ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದ ಆದೇಶದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ. 2025ರ ಜನವರಿಯಲ್ಲಿ ನಡೆದಿದ್ದ ಎಂಇಎಸ್ ಸಭೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜು ತಳವಾರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ … Continue reading *ಬೆಳಗಾವಿಯಲ್ಲಿ ಇಬ್ಬರು ಎಂಇಎಸ್ ಮುಖಂಡರ ಬಂಧನ*