ಪ್ರಗತಿವಾಹಿನಿ ಸುದ್ದಿ, ವಿಜಯಪುರ : ಶನಿವಾರ ವಿಜಯಪುರ ಜಿಲ್ಲೆಯಲ್ಲಿ ಒಂಬತ್ತು ಕೊರೋನಾ ವೈರಸ್ ಸೋಂಕಿತರು ಪತ್ತೆಯಾಗಿದ್ದು, ಅವರಲ್ಲಿ ಇಬ್ಬರು ಡಕಾಯಿತರಾಗಿದ್ದಾರೆ.
ಈ ಡಕಾಯಿತರು ಕರ್ನಾಟಕವಲ್ಲದೆ ಮಹಾರಾಷ್ಟ್ರದಲ್ಲೂ ಡಕಾಯಿತಿ ಮಾಡಿದ್ದು ವಿಜಯಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಇವರ ಗಂಟಲು ದ್ರವ, ರಕ್ತ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಗುರುತಿಸಲ್ಪಟ್ಟಿದು, ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ದಾಖಲಿಸಲಾಗಿದೆ.
ಈ ಡಕಾಯಿತರನ್ನು ಬಂಧಿಸುವಲ್ಲಿ ಭಾಗಿಯಾಗಿದ್ದ ಇಬ್ಬರು ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಹಾಗು 37 ಕಾನ್ಸ್ಟೇಬಲ್ ಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ