Karnataka NewsLatest
*ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಚರಂಡಿಯಲ್ಲಿ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯಲ್ಲಿ 12 ವರ್ಷದ ಬಾಲಕ ನಿವೇದನ್ ಇಂದು ಬೆಳಿಗ್ಗೆ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕ ಈ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್.ಮುಂಜೋಜಿ ಅಮಾನತುಗೊಂಡವರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮೌಖಿಕ ಆದೇಶ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯ್ ಮಹಾಂತೇಶ್ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.




