
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಟಾಟಾ ಏಸ್ ವಾಹನ, ಎರಡು ಬೈಕ್, ಕಾರು ಹಾಗೂ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರ ಗಾಯವಾಗಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹುಬ್ಬಳ್ಳಿ ಮೂಲದ ಶಿವಪ್ಪ ಶಹಾಪುರ ಹಾಗೂ ರಫೀಕ್ ಜಾಂಬೋಟಿ ಸಾವನ್ನಪ್ಪಿದ್ದಾರೆ.
ಮೊದಲು ಟಾಟಾ ಏಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದೆ. ಈ ಅಪಘಾತ ನೋಡುತ್ತ ರಸ್ತೆ ಬದಿ ನಿಂತಿದ್ದ ಮತ್ತಿಬ್ಬರು ಬೈಕ್ ಸವಾರರಿಗೆ ಲಾರಿ ಗುದ್ದಿದೆ. ಬಳಿಕ ಲಾರಿ ಪಲ್ಟಿಯಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದ ಲಾರಿಗೆ ಗುದ್ದಿದೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.