Belagavi NewsBelgaum NewsKarnataka News

*ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಇಬ್ಬರು ಪೊಲೀಸ್ ಪೇದೆಗಳ ಅಮಾನತು*

ಪ್ರಗತಿವಾಹಿನಿ ಸುದ್ದಿ: ನಿನ್ನೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ ಪ್ರಕರಣಕ್ಕೆ ಸಂಬದಿಸಿಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. 

ನಗರದ ಸಿಪಿಎಡ್ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದ ವೇಳೆ ನಡೆದಿದ್ದ ಘಟನೆಗೆ ಸಂಭದಿಸಿದಂತೆ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್ ಅವರು, ಖಡೇಬಜಾರ್ ಠಾಣೆ ಪೇದೆ ಬಿ.ಎ ನೌಕುಡಿ, ಕ್ಯಾಂಪ್ ಠಾಣೆ ಪೇದೆ ಮಲ್ಲಪ್ಪ ಹಡಗಿನಾಳ ಅವರನ್ನು ಅಮಾನತು ಮಾಡಲಾಗಿದೆ. ಗುಪ್ತ ಮಾಹಿತಿ ಸಂಗ್ರಹಿಸಿ ಪ್ರತಿಭಟನೆ ತಡೆಯುವಲ್ಲಿ ವಿಫಲವಾಗಿದಕ್ಕೆ ಕ್ರಮ ಎಂದು ಸಸ್ಪೆಂಡ್ ಆದೇಶದಲ್ಲಿ ಉಲ್ಲೇಖಿಸಲಾಗಿದೆ.‌

Related Articles

Back to top button