
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾಕಿ ಮೆರವಣಿಗೆ ನಡೆಸಿದ ಕೇಸ್ ಗೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಇಬ್ಬರು ಪೊಲೀಸರ ತಲೆದಂಡವಾಗಿದೆ.
ಸವಣೂರಿನ ಸಿಪಿಐ ದೇವಾನಂದ ಹಾಗೂ ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನ ಅವರನ್ನು ಸಸ್ಪೆಂಡ್ ಮಾಡಿ ಹಾವೇರಿ ಎಸ್ಪಿ ಯಶೋದಾ ವಂಟಗೋಡಿ ಆದೇಶ ಹೊರಡಿಸಿದ್ದಾರೆ.
ಡಿ. 10 ರಂದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ ಸ್ಥಳೀಯರು ಮೆರವಣಿಗೆ ಮಾಡಿದ್ದರು.
ಶಿಕ್ಷಕನ ಮರ್ಯಾದೆ ಕಳೆದು ಬೀದಿ ಬೀದಿಯಲ್ಲಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ್ದರು. ಈ ಸಂಬಂಧ ಸವಣೂರಿನ ಪೋಲಿಸರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೊನೆಗೆ ಎಸ್ಪಿ ಕರ್ತವ್ಯ ಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ.



