
ಪ್ರಗತಿವಾಹಿನಿ ಸುದ್ದಿ: ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಯಲಹಮ್ಕ ನ್ಯೂ ಟೌನ್ ನ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.
ನೇಪಾಳ ಮೂಲದ ಬಿಕ್ರಂ (21) ಹಾಗೂ ಬಿಹಾರ ಮೂಲದ ತೂರಿ (33) ಕೊಲೆಯಾಗಿರುವ ಸೆಕ್ಯೂರಿಟಿ ಗಾರ್ಡ್ ಗಳು. ತಡರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.