
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕರ್ತವ್ಯಲೋಪದ ಆರೋಪದಡಿ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಹೆಡ್ ವಾರ್ಡರ್ ಬಿ.ಎಲ್. ಮೇಳವಂಕಿ, ವಾರ್ಡರ್ ವಿ.ಟಿ ವಾಗಮೋರೆ ಅವರನ್ನು ಅಮಾನತುಗೊಳಿಸಿ ಕಾರಾಗೃಹ ಉಪಮಹಾನಿರೀಕ್ಷಕ ಉತ್ತರ ವಯಲದ ಟಿ.ಪಿ ಶೇಷ ಅವರು ಆದೇಶ ಹೊರಡಿಸಿದ್ದಾರೆ.
ಜೈಲಿನಲ್ಲಿ ಕೈದಿಗಳಿಗೆ ಕಿರುಕುಳ ನೀಡುವುದು, ಹಣ ಕೊಟ್ಟ ಕೈದಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿದ ಆರೋಪವನ್ನು ಅಮಾನತುಗೊಂಡವರು ಎದುರಿಸುತ್ತಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಕೈದಿಗಳಿಂದ ಪರಸ್ಪರ ಹಲ್ಲೆ ಪ್ರಕರಣ ಕೂಡ ನಡೆದಿತ್ತು. ಈ ಎಲ್ಲ ವಿಚಾರಗಳನ್ನು ಪರಿಗಣಿಸಿ ಅಮಾನತು ಆದೇಶ ಹೊರಡಿಸಲಾಗಿದೆ.
ಇದೇ ವೇಳೆ ಜೈಲಿನ ಕೈದಿಗಳು ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ತನಿಖೆ ಕೂಡ ನಡೆಯುತ್ತಿದ್ದು, ಪ್ರಾಥಮಿಕ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹ ಉಪಮಹಾನಿರೀಕ್ಷಕ ಉತ್ತರ ವಯಲದ ಟಿ.ಪಿ ಶೇಷ ಅವರಿಗೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ