ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಬರೆಯಲೆಂದು ಹೋದ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಶವ ಕೆರೆಯಲ್ಲಿ ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿನಲಿ ನಿನ್ನೆ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಶವ ಬೈಂದೂರಿನ ಕೆರೆಯಲ್ಲಿ ಪತ್ತೆಯಾಗಿದೆ.
ನಾಗೇಂದ್ರ (13) ಹಾಗೂ ಮೊಹಮ್ಮದ್ ಶಫಾನ್ (13) ಮೃತ ವಿದ್ಯಾರ್ಥಿಗಳು. ಇಬ್ಬರೂ ಬೈಂದೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ನಿನ್ನೆ ಪರೀಕ್ಷೆ ಮುಗಿಸಿದ ಬಳಿಕ ಇಬ್ಬರು ವಿದ್ಯಾರ್ಥಿಗಳು ಶನೇಶ್ವರ ದೇವಾಲಯದ ಹಿಂಬದಿಯ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಇಬ್ಬರು ಬಾಲಕರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಬಾಲಕರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ