Kannada NewsKarnataka NewsLatest

*ವಿಡಿಯೋ ವೈರಲ್; ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಖಾಸಗಿ ವಿಡಿಯೋ ವೈರಲ್ ಆದ ಕಾರಣಕ್ಕೆ ಮನನೊಂದ ಪದವಿ ವಿದ್ಯಾರ್ಥಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಕಾಲೇಜೊಂದರಲ್ಲಿ ಯುವಕ ಹಾಗೂ ಯುವತಿ ಕಾಲೇಜಿನ ಕಟ್ಟಡದ ಮೇಲೆ ಖಾಸಗಿ ಕ್ಷಣಗಳನ್ನು ಕಳೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ನೊಂದ ಯುವಕ-ಯುವತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಕಾಲೇಜಿನ ಮಹಡಿಯ ಮೇಲೆ ಯುವಕ-ಯುವತಿ ಇರುವ ದೃಶ್ಯವನ್ನು ಯಾರೋ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದರು. ಈ ಘಟನೆಯಿಂದ ಮನನೊಂದ ವಿದ್ಯಾರ್ಥಿಗಳಿಬ್ಬರೂ ಸಾವಿಗೆ ಶರಣಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಯುವತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರೆ, ಅದೇ ದಿನ ರಾತ್ರಿ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Related Articles

Back to top button