
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಸಿಸ್ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಎನ್ ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ತಮಿಳುನಾಡು ಮೂಲದ ಅಹಮ್ಮದ್ ಅಬ್ದುಲ್ ಖದೀರ್ (40) ಹಾಗೂ ಬೆಂಗಳೂರಿನ ಇರ್ಫಾನ್ ನಾಸೀರ್ (33) ಎಂದು ಗುರುತಿಸಲಾಗಿದೆ. ಇರ್ಫಾನ್ ಅಕ್ಕಿ ವ್ಯಾಪಾರಿಯಾಗಿದ್ದ. ಬಂಧಿತರಿಂದ ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ಎಲೆಕ್ಟಿಕ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಇಬ್ಬರು ಶಂಕಿತರು ಐಸಿಸ್ ಉಗ್ರ ಸಂಘಟನೆಗಾಗಿ ಬೆಂಗಳೂರು ಮತ್ತು ಚೆನ್ನೈನಲ್ಲಿ ದೇಣಿಗೆ ಮೂಲಕ ಹಣ ಸಂಗ್ರಹಿಸುತ್ತಿದ್ದರು ಮತ್ತು ಯುವಕರನ್ನು ಉಗ್ರ ಸಂಘಟನೆಗೆ ಸೇರಿಕೊಳ್ಳುವಂತೆ ಪ್ರೇರೆಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ