ಪ್ರಗತಿವಾಹಿನಿ ಸುದ್ದಿ, ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.
ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು.
ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು.
ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
https://pragati.taskdun.com/crime-news/belgaum-two-youths-who-went-for-new-moon-worship-fall-into-a-tragic-accident/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ