Kannada NewsKarnataka NewsLatest

*ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕಪಿಲಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ಮೂವರು ಕಪಿಲಾ ನದಿ ಪಾಲಾಗಿದ್ದಾರೆ. ಮೂವರು ಅಯ್ಯಪ್ಪ ಮಾಲಾಧಾರಿಗಳಾಗಿದ್ದು, ಸ್ನಾನಕ್ಕೆಂದು ನದಿಗೆ ಇಳಿದಿದ್ದ ವೇಳೆ ಈ ದುರಂತ ಸಂಭವಿಸಿದೆ.

ಐವರು ಅಯ್ಯಪ್ಪ ಮಾಲಾಧಾರಿಗಳು ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಮೂವರು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇಬ್ಬರು ಈಜಿ ಸಡ ಸೇರಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಈಜು ತಜ್ಞರು ಆಗಮಿಸಿದ್ದು, ನೀರುಪಾಲಾದವರಿಗಾಗಿ ಹುಡುಕಾಟ ನಡೆಸಲಾಗಿದೆ.

Home add -Advt

Related Articles

Back to top button