Karnataka News

*ವಿದ್ಯುತ್ ಕಂಬ ತುಂಡಾಗಿ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಸುದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತ ಮಹಿಳೆಯರು. ಇಬ್ಬರೂ ಸುದ್ದುಗುಂಟೆಪಾಳ್ಯದವರು. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯರ ಮೇಲೆ ವಿದ್ಯುತ್ ಕಂಬ ತುಂಡಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ಜೆಸಿಬಿ ಚಾಲಕನನ್ನು ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button