Karnataka News

*ಎಳ್ಳಮವಾಸ್ಯೆಯಂದೇ ದುರಂತ: ಇಬ್ಬರು ಯುವಕರು ಸಮುದ್ರಪಾಲು*

ಪ್ರಗತಿವಾಹಿನಿ ಸುದ್ದಿ: ಎಳ್ಳಮವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆಂದು ನೀರಿಗಿಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಕಾಲು ತಾಲೂಕಿನ ಹೆಜಮಾಡಿಯಲ್ಲಿ ಈ ದುರಂತ ಸಂಭವಿಸಿದೆ. ಎಳ್ಳಮವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆಂದು 6 ಜನರು ಸಮುದ್ರಕೆ ಇಳಿದಿದ್ದರು. ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ರಕ್ಷಿಸಲು ಯತ್ನಿಸಿದ್ದಾರೆ ಆದರೆ ಸಾಧ್ಯವಾಗಿಲ್ಲ.

6 ಜನರಲ್ಲಿ ನಾಲ್ವರನ್ನು ರಕ್ಷಿಸಿ ಕರೆತಂದಿದ್ದಾರೆ. ಆದರೆ ಇಬ್ಬರು ಯುವಕರು ಸಮುದ್ರಪಾಲಾಗಿದ್ದಾರೆ. ರಕ್ಷಿಸಲ್ಪಟ್ಟ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button