*ಎಳ್ಳಮವಾಸ್ಯೆಯಂದೇ ದುರಂತ: ಇಬ್ಬರು ಯುವಕರು ಸಮುದ್ರಪಾಲು*

ಪ್ರಗತಿವಾಹಿನಿ ಸುದ್ದಿ: ಎಳ್ಳಮವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆಂದು ನೀರಿಗಿಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಲು ತಾಲೂಕಿನ ಹೆಜಮಾಡಿಯಲ್ಲಿ ಈ ದುರಂತ ಸಂಭವಿಸಿದೆ. ಎಳ್ಳಮವಾಸ್ಯೆ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆಂದು 6 ಜನರು ಸಮುದ್ರಕೆ ಇಳಿದಿದ್ದರು. ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ರಕ್ಷಿಸಲು ಯತ್ನಿಸಿದ್ದಾರೆ ಆದರೆ ಸಾಧ್ಯವಾಗಿಲ್ಲ. 6 ಜನರಲ್ಲಿ ನಾಲ್ವರನ್ನು ರಕ್ಷಿಸಿ ಕರೆತಂದಿದ್ದಾರೆ. ಆದರೆ ಇಬ್ಬರು ಯುವಕರು ಸಮುದ್ರಪಾಲಾಗಿದ್ದಾರೆ. ರಕ್ಷಿಸಲ್ಪಟ್ಟ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. *ಆತ್ಮಹತ್ಯೆಗೆ ಯತ್ನಿಸಿದ … Continue reading *ಎಳ್ಳಮವಾಸ್ಯೆಯಂದೇ ದುರಂತ: ಇಬ್ಬರು ಯುವಕರು ಸಮುದ್ರಪಾಲು*