
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹೊಂಡಕ್ಕೆ ಬಿದ್ದು ಯುವಕರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
27 ವರ್ಷದ ವರುಣ್ ಹಾಗೂ 28 ವರ್ಷದ ವೀಕ್ಷಿತ್ ಮೃತರು. ವರುಣ್ ಅಳಪೆ ನಿವಾಸಿಯಾಗಿದ್ದು, ವೀಕ್ಷಿತ್ ಎಕ್ಕೂರು ನಿವಾಸಿಯಾಗಿದ್ದರು.
ಅಳಪೆ ಪಡ್ಪು ಎಂಬಲ್ಲಿ ಕಾಮಗಾರಿಗಾಗಿ ತೆಗೆದಿದ್ದ ಹೊಂಡದಲ್ಲಿ ಮಳೆಯಿಂದಾಗಿ ನೀರು ತುಂಬಿಕೊಂಡಿತ್ತು. ಆಯತಪ್ಪಿ ಯುವಕರಿಬ್ಬರೂ ಹೊಂಡದಲ್ಲಿ ಬಿದ್ದಿದ್ದಾರೆ. ವಿಷಯ ತಿಳಿದು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ.
ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ