LatestUncategorized

*ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ.

ವಿಧಾನಸಭೆಯ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅಧಿಕಾರ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ. ನನ್ನ ಸರ್ಕಾರದ ಅವಧಿಯಲ್ಲಿ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದೀರಿ. ಸದನದಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಗೂ ಭಾಜನರಾಗಿದ್ದೀರಿ. ಒಬ್ಬ ಮಾದರಿ ಶಾಕನಾಗಿ ಕೆಲಸ ಮಾಡಿದ್ದೀರಿ. ಈಗ ಸ್ಪೀಕರ್ ಆಗಿ ಆಯ್ಕೆಯಾಗಿರುವುದು ಸಂತಸದ ವಿಚಾರ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದರು.

https://pragati.taskdun.com/m-p-renukacharyareactionvidhanasabha-electionbjp-lose/


Home add -Advt

Related Articles

Back to top button