ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ಆಗಮಿಸಿ, ಸಭಾಪತಿ ಸ್ಥಾನಕ್ಕಾಗಿ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಯುಟಿ ಖಾದರ್ ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಮೊದಲಾದವರು ಸಾಥ್ ನೀಡಿದರು.
ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿಯಾಗಿ ಯು.ಟಿ.ಖಾದರ್ ಅವರನ್ನು ಕಾಂಗ್ರೆಸ್ ನಾಯಕರು ಆಯ್ಕೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಿನ್ನೆ ಕರೆ ಮಾಡಿ ಯು.ಟಿ.ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಒಪ್ಪಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಯು.ಟಿ.ಖಾದರ್ ಇಂದು ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಳೆ ವಿಧಾನಸಭಾ ಸ್ಪೀಕರ್ ಆಯ್ಕೆಯಾಗಲಿದ್ದು, ಯು.ಟಿ.ಖಾದರ್ ಆಯ್ಕೆ ಬಹುತೇಕ ಖಚಿತ ಎಂಬ ಮಾತು ಕೇಳಿಬರುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ