ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಶಾಲೆ, ಶಿಕ್ಷಣ ಸಂಸ್ಥೆಗಳ ಉಳಿವಿಗಾಗಿ ಸರ್ಕಾರ ಬಡ್ಡಿರಹಿತ ಸಾಲ ನೀಡಲಿ. ವಿದ್ಯಾರ್ಥಿಗಳ ಹಾಗೂ ಮ್ಯಾನೇಜ್ಮೆಂಟ್ ಬಗ್ಗೆ ಕೂಡ ಸರ್ಕಾರ ಗಮನಹರಿಸಬೇಕಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಲೆಗಳಿಗೆ ಫೀಸ್ ಕಟ್ಟಬೇಡಿ ಎಂದು ಸರ್ಕಾರ ಹೇಳಿದೆ. ಹೀಗಾಗಿ ಫೀಸ್ ಕಟ್ಟಲು ಕೆಲವರು ತಯಾರಿದ್ದರೂ ಕಟ್ಟಲಿಲ್ಲ. ಹೀಗಾಗಿರುವಾಗ ಶಾಲೆಗಳು ಉಳಿಯೋದಾದರೂ ಹೇಗೆ ಎಂದು ಪ್ರಶ್ನಿಸಿದರು.
ಕೆಲ ಶಾಲಾ ಆಡಳಿತ ಮಂಡಳಿಗೆ ಕಟ್ಟಡದ ಬಾಡಿಗೆ ಕೊಡಲು ಸಾಧ್ಯವಿರುವುದಿಲ್ಲ. ಇದರಿಂದ ಶಾಲೆಗಳಲ್ಲಿ ಶಿಕ್ಷಕರು ಕೆಲಸ ಕಳೆದುಕೊಳ್ಳುತ್ತಾರೆ. ಆದ್ದರಿಂದ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ಬಡ್ಡಿರಹಿತ ಸಾಲ ನೀಡಲಿ. ಹಾಗೆಯೇ ವಿದ್ಯಾರ್ಥಿಗಳ ಬಗ್ಗೆ ಹಾಗೂ ಮ್ಯಾನೆಜ್‍ಮೆಂಟ್ ಬಗ್ಗೆ ಕೂಡ ಸರ್ಕಾರ ಗಮನಹರಿಸಲಿ ಎಂದು ಒತ್ತಾಯಿಸಿದರು.
ಇನ್ನು ಆನ್ ಶಿಕ್ಷಣ ಹಾಗೂ ಶಾಲೆಗಳಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಸ್ಪಷ್ಟತೆ ಇಲ್ಲ. ಸರ್ಕಾರ ಈ ವಿಚಾರದಲ್ಲಿ ಬೇಜವಬ್ದಾರಿ ತೋರುತ್ತಿದೆ. ಸಚಿವರು ಈ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಈ ಮೂಲಕ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 5ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ಬೇಡ ಅನ್ನೋದಕ್ಕೆ ನಮ್ಮ ಸಮ್ಮತಿಯಿದೆ. ರಾಜ್ಯದ ಎಲ್ಲಾ ಮಕ್ಕಳಿಗೂ ಸ್ಮಾರ್ಟ್ ಫೋನ್ ಕೊಡಿಸುವ ಸಾಮರ್ಥ್ಯ ಇರಲ್ಲ. ಸೈಕಲ್ ಕೊಡುವ ಸ್ಕೀಮ್ ಬಿಟ್ಟು ಅದನ್ನು ಬೇರೆ ವ್ಯವಸ್ಥೆಗೆ ಬಳಸಿಕೊಳ್ಳಿ. ಎಲ್ಲದಕ್ಕೂ ಮೊದಲು ಟೆಸ್ಟ್ ಬುಕ್ ಪ್ರಿಂಟ್ ಮಾಡಿಸಿ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ