Belagavi NewsBelgaum News

*ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವರಾಜ ಕದಂ, ಬಾಲಕೃಷ್ಣ ತೇರಸೆ, ಮಥುರಾ ತೇರಸೆ, ನೀಲಕಂಠ ಕುರುಬರ, ನಾಣು ಗಡಕರಿ, ಪಿಡಿಓ ಅಧಿಕಾರಿ, ಶೆಗುಣಸಿ, ಲಕ್ಷ್ಮಣ ಕುರಬರ, ಸಂಜು ಶಿವಾಜಿ, ಭರ್ಮಾ ಶಹಾಪೂರಕರ್, ಲಕ್ಷ್ಮಣ ಚೌಗುಲೆ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button