
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರೆ.
ಬೆಂಗಳೂರಿನ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘುಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಶಾಸಕರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.