
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಮೇರೆಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಮುಸ್ಲಿಂರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ