Karnataka News

*ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಲು ಈತನೆ ಮಾಸ್ಟರ್ ಮೈಂಡ್..?*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಹಿಂದೆ ಮುಫಿ ಮುಷ್ಕಾಕ್ ಮಕ್ಟೋಲಿ ಎಂಬಾತನ ಪ್ರಚೋದನಾಕಾರಿ ಭಾಷಣ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಮುಷ್ಕಾಕ್ ಭಾಷಣದ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಮುಷ್ಕಾಕ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಗಲಭೆ ನಡೆಯುವ ಮುನ್ನ ಮುಫ್ರಿ ಮುಷ್ಕಾಕ್ ಮಕ್ಟೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಪ್ರಚೋದನೆ ನೀಡಿದ ಮುಷ್ಕಾಕ್ ಮಕ್ಟೋಲಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮುಸ್ಲಿಂ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ನಿಲ್ಲಿಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು. ನಿಮ್ಮ ಇಚ್ಛೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಈ ವಿಡಿಯೋವನ್ನು ಎಲ್ಲ ಕಡೆ ಶೇರ್ ಮಾಡಿ” ಎಂದು ಮೈಕ್ ಹಿಡಿದು ಭಾಷಣ ಮಾಡಿದ ವಿಡಿಯೋ ವೈರಲ್ ಆಗಿದೆ.

Home add -Advt

Related Articles

Back to top button